Home Archive by category Fresh News (Page 941)

ಕುಲಶೇಖರದ ಕೊಂಗೂರಿನಲ್ಲಿ ಗುಡ್ಡ ಕುಸಿತ: ರೈಲ್ವೇ ಹಳಿಯ ಮೇಲೆ ಬಿದ್ದ ಮಣ್ಣು: ರೈಲು ಸಂಚಾರ ಸ್ಥಗಿತ

ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ  ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ

ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ

ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ-ಲಕ್ಷಾಂತರ ರೂಪಾಯಿ ನಷ್ಟ

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ. ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಕೊಳ್ನಾಡುವಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುದಾನ ಮಂಜೂರು: ಎಂ.ಎಸ್.ಮಹಮ್ಮದ್

ವಿಟ್ಲ : ಕೊಳ್ನಾಡು ಜಿ.ಪಂ. ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಕೊಳ್ನಾಡು, ಸಾಲೆತ್ತೂರು ಗ್ರಾ.ಪಂ.ಗಳಿಗೆ ಒಟ್ಟು ಜಲಜೀವನ್ ಮಿಷನ್ ಯೋಜನೆಯಡಿ 7.81 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಜಿ.ಪಂ.ಮಾಜಿ ಎಂ.ಎಸ್.ಮಹಮ್ಮದ್ ತಿಳಿಸಿದರು.ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ಪ್ರತಿನಿಧಿಸಿದ ಕೊಳ್ನಾಡು ಜಿ.ಪಂ.ಕ್ಷೇತ್ರವು ದ.ಕ.ಜಿಲ್ಲೆಯಲ್ಲೇ ಅತೀ ಹೆಚ್ಚು ಅನುದಾನ ಪಡೆದಿದೆ. ಗ್ರಾ.ಪಂ.ನ ನೀರು ಮತ್ತು ನೈರ್ಮಲ್ಯ ಸಮಿತಿಯು

ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು

ಪುತ್ತೂರಿನ ಬೊಳ್ಳಾನದಲ್ಲಿ ಧರೆ ಕುಸಿತ: ಅಪಾಯದ ಸ್ಥಿತಿಯಲ್ಲಿ 2 ಮನೆಗಳು

ಪುತ್ತೂರು : ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತು ಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ. ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ

ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

ಮಂಗಳೂರು:  ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಡಿ ಭಾಗದಲ್ಲಿರುವ ದಕ್ಷಿಣ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತವೆಂದು ಘೋಷಣೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ – ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಂಡೋಸಲ್ಫಾನ್ ಸಂತ್ರಸ್ತರಿಗೆ ಪಿಂಚಣಿ ಸಲ್ಲಿಕೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಲು ಜಿಲ್ಲಾಧಿಕಾರಿ ಸೂಚನೆ

 ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು  ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ

ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.