ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಯಾಗಿದೆ.ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ ಧೂಳು ತುಂಬಿಕೊಂಡರೆ ಮಳೆಗಾಲದಲ್ಲಿ ಕೆಸರುಮಯಗೊಂಡು ಪಾದಚಾರಿಗಳಿಗೆ ನಡೆದಾಡಲು ಕೂಡ
ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ
ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.ಜಯಂತಿ ಮಕ್ಕಳ ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ವೇಳೆ ಸಂಭವಿಸಿದ ಭಾರೀ ಸಿಡಿಲು ಅವರ ಮನೆಗೆ ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು
ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ
ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ಪುನರ್ ರಚನೆಯಾಗುತ್ತಿದೆ. 43 ಮಂದಿ ಕೇಂದ್ರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ , ಒಡಿಶಾದ ಅಶ್ವಿನಿ ವೈಷ್ಣವ್, ಕರ್ನಾಟಕದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಕಿರಣ್ ರಿಜಿಜು, ಅನುರಾಗ್
ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ. ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಆರು ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್
ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು


















