ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ
ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮಲ್ಲಿ ಕಾಲೇಜಿನ ದ್ರವ್ಯಗುಣ,
ಉಳ್ಳಾಲ : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದವರು. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ.ನಡುಪದವು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿನಯ್ ಉದ್ಯೋಗದಲ್ಲಿದ್ದರು. ಶಬರಿಮಲೆ ಯಾತ್ರೆಗೆ ತೆರಳುವ ಸಂದರ್ಭ
ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ
ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ ಅಗತ್ಯವೂ ಎಲ್ಲೂ ಬರಬಾರದೆಂದು ಈಗಾಗಲೇ ಹೇಳಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸಂಜೆ ಕೊಲ್ಲೂರಿನಲ್ಲಿ ವಾಸ್ತವ್ಯ ಮಾಡಿದ್ದ ಡಾ.ಪರಮೇಶ್ವರ್ ಇಂದು ಬೆಳಗ್ಗೆ ಮೂಕಾಂಬಿಕಾ
ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ. ಹೆಸರು ನೊಂದಾಯಿಸಲು ಸಂಪರ್ಕಿಸಿ
ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ
ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಸ್ಲ್ಯಾಬ್ ಮನೆಯಾದ್ದರಿಂದ ಮನೆಯಲ್ಲಿ




























