ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನ ಬೆಟ್ಟು, ಪಡುಮಾರ್ನಾಡ್ ಇದರ 87ನೇ ಸೇವಾ ಯೋಜನೆಯ ಜನವರಿ ತಿಂಗಳ 2ನೇ ಯೋಜನೆಯ 10,000ವನ್ನು ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಐಶ್ವರ್ಯ ಅವರ ಚಿಕಿತ್ಸೆಗೆ ನೀಡಲಾಯಿತು. ಐಶ್ವರ್ಯ ಅವರು ತನ್ನ ಪತಿ ಜಗದೀಶ್ ಆಚಾರ್ಯ ಅವರೊಂದಿಗೆ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಮನೆಯಿಂದ ದ್ವಿಚಕ್ರ ವಾಹನ
ಕಡಬ: ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ರಾವ್ ಅವರು ಇಂದು ಭಾನುವಾರ ದಿನಾಂಕ 11/೦1/2026 ರಂದು ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು, ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಮಟ್ಟದಲ್ಲಿಯೂ ಅದರ ಚಟುವಟಿಕೆಗಳು ಇನ್ನಷ್ಟು ಬಲಿಷ್ಠವಾಗಬೇಕೆಂದು ಹೇಳಿದರು.
ಕಡಬ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶಿವಪ್ರಸಾದ್ (55), ಕುಟ್ರುಪ್ಪಾಡಿ ಗ್ರಾಮ, ಕಡಬ ತಾಲೂಕು. ಅವರ ಹಿರಿಯ ಮಗಳು ಶಿಲ್ಪಾ (28) 4 ತಿಂಗಳ ಹಿಂದೆ ಮನೋಜ್ ಎಂಬಾತನೊಂದಿಗೆ ರೆಜಿಸ್ಟರ್ ಮದುವೆಯಾಗಿದ್ದಳು. ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸವಿದ್ದು, ಶಿಲ್ಪಾ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದಳು. 08.01.2026 ರಂದು ಸಂಜೆ ಶಿಲ್ಪಾ ವಿಷ ಸೇವಿಸಿದ್ದಾಗಿ ಮಾಹಿತಿ ಬಂದಿದ್ದು, ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆ, ವೆನ್ಲಾಕ್ ಹಾಗೂ ಎನೆಪೋಯ
ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ವಿಪರೀತ ಮದ್ಯಪಾನ ಹಾಗೂ ಅಮಲು ಪದಾರ್ಥ ಸೇವನೆಯ ಚಟಕ್ಕೆ ಒಳಗಾಗಿದ್ದ ಮಂಜು ನಾಯ್ಕ (49) ಎಂಬವರು ಪ್ಲಾಸ್ಟಿಕ್ ಬೆಲ್ಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜು ನಾಯ್ಕ ಅವರು ಮನೆಯ ಮೇಲ್ಭಾಗದ ಸಿಮೆಂಟ್ ಕಿಟಕಿಯ ತೂತಿಗೆ ಪ್ಲಾಸ್ಟಿಕ್ ಬೆಲ್ಟ್‌ನ ಒಂದು ತುದಿಯನ್ನು ಕಟ್ಟಿ,
ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ
ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ
ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ
ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ
ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ




























