Home Archive by category kadaba (Page 2)

ಕಡಬದಲ್ಲಿ ಪೊಲೀಸ್ ಜೀಪು ಹಾಗೂ ಬೊಲೆರೋ ನಡುವೆ ಢಿಕ್ಕಿ: ಎಸ್.ಐ ಸಹಿತ ಹಲವರು ಅಪಾಯದಿಂದ ಪಾರು

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಸಣ್ಣಪುಟ್ಟ ಗಾಯದಿಂದ ಪಾರಾದ ಸವಾರರು

ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ಮೆಸ್ಟ್ರೋ ವಾಹನ ಸವಾರ ಪೊಲೀಸ್ ವಾಹನವನ್ನು ಕಂಡು ಎಡಬದಿಗೆ ತಿರುಗಿಸಿದ್ದು, ಈ ಸಂದರ್ಭದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಸಣ್ಣಪುಟ್ಟ ಗಾಯಗೊಂಡ ವಾಹನ ಸವಾರರನ್ನು ತಕ್ಷಣವೇ ಪೊಲೀಸ್ ವಾಹನದಲ್ಲಿ ಕಡಬ

ಶ್ರೀ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆ.30ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಕಡಬ : ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ

ಎಸೆಸೆಲ್ಸಿ ಫಲಿತಾಂಶ: ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ.ಅನನ್ಯ.ಎಂ.ಡಿ ಮತ್ತು ವೆನಿಸಾ ಶೆರಿನಾ ಡಿಸೋಜಾ ಈ ಸಾಧನೆ ತೋರಿದ ವಿದ್ಯಾರ್ಥಿನಿಯರಾಗಿದ್ದು, ಲಾಕ್ ಡೌನ್ ನಿಂದಾಗಿ ಶಾಲೆ ಮುಚ್ಚಿ ಸರಿಯಾದ ರೀತಿಯ ತರಗತಿ ನಡೆಯದ ಸಮಯದಲ್ಲೂ ತನ್ನ ಪರಿಶ್ರಮದಿಂದಾಗಿ ಈ ಸಾಧನೆ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರದ ಆರೋಪ: ಶಿಕ್ಷಕನ ಬಂಧನ

ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಆತನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಈ

ಉಳ್ಳವರು ಸಮಾಜಕ್ಕೆ ಕೊಡುಗೆ ನೀಡಬೇಕು: ಸಚಿವ ಅಂಗಾರ ಅಭಿಮತ

ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ

ಸುಬ್ರಹ್ಮಣ್ಯದಲ್ಲಿ ಸರಕಾರಿ ಬಸ್-ಕಾರು ಮಧ್ಯೆ ಅಪಘಾತ

ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ

ಕಡಬದ ಪೆರಾಬೆಯಲ್ಲಿ ಅನುಮಾನಸ್ಪದ ವ್ಯಕ್ತಿಯ ಬಂಧನ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ ಸಹಾಯಕ ಉಪನರೀಕ್ಷಕರಾದ ಸುರೇಶ್ ಸಿಟಿಯವರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶರತ್ (34) ಮರವೂರು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯ ಸಿಬ್ಬಂದಿಗಳು ಈ ಮಾರ್ಗವಾಗಿ ಗಸ್ತು ತಿರುಗುತ್ತಿದ್ದ

ನೆಲ್ಯಾಡಿಯ ಪೆರಿಯಶಾಂತಿಯಲ್ಲಿ ಬೈಕ್‌ಗೆ ಸರ್ಕಾರಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪರಾರಿಯಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ಬೆನ್ನಟ್ಟಿ ಹೋದ ಪೊಲೀಸರು ಗುಂಡ್ಯ ಸಮೀಪ ವಶಕ್ಕೆ ಪಡೆದಿದ್ದಾರೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತಿದ್ದ ದ್ವಿಚಕ್ರ