Home Archive by category mangaluru (Page 3)

ಉಳ್ಳಾಲ: ಕಿಂಗ್ಸ್ ಕಲ್ಲಾಪು ವತಿಯಿಂದ ಭಂದುತ್ವ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ‌ ಹಾಲ್‌ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ‌ಭಾಗವಹಿಸಿ‌ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ‌ಮಾಡಿಕೊಂಡು ಇಫ್ತಾರ್

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ತನ್ನ

ಮಂಗಳೂರು: ಸೌಹಾರ್ದ ಇಫ್ತಾರ್ ಕೂಟ – 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,

ಮಂಗಳೂರು: ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ

ಮಂಗಳೂರು : ಮಾ.23ರಂದು ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ ಕಲ್ಕುಡ ಆದಿ ದೈವಸ್ಥಾನ ದಲ್ಲಿ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ-ಕಲ್ಕುಡ ಆದಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಮಾರ್ಚ್ 23ರಂದು ಧಾರ್ಮಿಕ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಮಂಗಳೂರು ತಾಲೂಕಿನಲ್ಲಿ ಕಲ್ಲುರ್ಟಿ ದೈವಕ್ಕೆ ಆದಿ ಸ್ಥಳವಾದ ಪಾದೆಮನೆಯಲ್ಲಿ ದಿವಂಗತ ಸೋಮಪ್ಪ ಪೂಜಾರಿ ಅವರ ಮನೆಯಲ್ಲಿ ಉಗಣಬೈದೆದಿ ಕಾಲದಿಂದ ನಂಬಿಕೊಂಡ ಬಂದಂತಹ ಮಹಾ ಕಟಾಕ್ಷದ ಶ್ರೀ ಕಲ್ಲುರ್ಟಿ ಕಲ್ಕುಡ ಮತ್ತು ಗುಳಿಗ ಪಂಜಿರ್ಲಿ ಹಾಗೂ ರಾಹು ದೈವಗಳ ವರ್ಷಾವಧಿ ನೇಮೋತ್ಸವ

ಕೊಣಾಜೆ: ಗಾಂಜಾ ಬೇಟೆ – ನಾಲ್ವರ ಬಂಧನ

ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ ಕನಕೂರಿನ ಅಶ್ರಫ್ ಯಾನೆ ಪೊಂಗ (30), ತಿಲಕನಗರದ ಮೊಹಮ್ಮದ್ ಅಲ್ಫಾಝ್ ( 26) ಇಬ್ಬರನ್ನು 115 ಗ್ರಾಂ

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ. ಡಯನೀಶಿಯಸ್ವಾಜ್‍ರವರು ಇತ್ತೀಚೆಗೆ ಔಪಚಾರಿಕವಾಗಿ ಘೋಷಿಸಿದ್ದಾರೆ. ಮೇ 20, 1974 ರಂದು ಉಡುಪಿ ಜಿಲ್ಲೆಯ

ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ