Home Archive by category manipal

‘ದಿ ಕೇರಳ ಸ್ಟೋರಿ’ : ಉಡುಪಿಯಲ್ಲಿ ಮಹಿಳೆಯರಿಗೆ ಉಚಿತ ಪ್ರದರ್ಶನ

ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ

ವಿಶ್ವ ಆರೋಗ್ಯ ದಿನಾಚರಣೆ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ

ಶಿವಪಾಡಿಯಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಹುಟ್ಟುಹಬ್ಬ ಆಚರಣೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24, 2023 ರ ಶುಕ್ರವಾರದಂದು ತಮ್ಮ ಹುಟ್ಟುಹಬ್ಬವನ್ನು ಯಾಗದ ಚಪ್ಪರದಲ್ಲೇ ನಗರಸಭೆಯ ಪೌರ ಕಾರ್ಮಿಕರೊಂದಿಗೆ ಕೂಡಿ ದೀಪವನ್ನು ಬೆಳಗಿಸುವ ಮೂಲಕ ವಿಭಿನ್ನವಾಗಿ ಆಚರಿಸಿದರು. ಶಾಸಕರ ಹುಟ್ಟುಹಬ್ಬಕ್ಕೆ ಆಗಮಿಸಿದ ಪೌರ ಕಾರ್ಮಿಕರಿಗೆ ವಸ್ತ್ರ

ಭಾರತದ ಯುವ ಶಕ್ತಿಗೆ ಮಣಿಪಾಲ ಗ್ರೂಪ್ ಸಂಸ್ಥೆಯ ಕೊಡುಗೆ ಅಪಾರ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲೆಗೆ ಪ್ರವಾಸವನ್ನು ಕೈಗೊಂಡು ಇಂದು ಶುಕ್ರವಾರದಂದು ಉಡುಪಿಗೆ ಆಗಮಿಸಿದ್ದು, ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಣಿಪಾಲದ ಮಾಹೆ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸುತ್ತಾ, ತಮ್ಮ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಮಾಹೆ ಸಂಸ್ಥೆ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ

ಮಣಿಪಾಲ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಓರ್ವ ಪೊಲೀಸ್ ವಶಕ್ಕೆ

ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇವರು ತನ್ನ ಸ್ನೇಹಿತರೊಂದಿಗೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ಬ್ಯಾರೆಲ್ಸ್ ಪಬ್‌ಗೆ ಬಂದಿದ್ದು, ಅಲ್ಲಿ ಮದ್ಯ ಸೇವಿಸಿ

ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್

ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar