Home Archive by category Manjeshwara

ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಕುಸಿದು ಬಿದ್ದು ಸಾವು

ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಶಾಲೆಯ ಕ್ರೀಡಾ ಸ್ಪರ್ಧೆಯ ಮಧ್ಯೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಂಗಲ್ಪಾಡಿ ಜಿಎಲ್‌ಪಿ ಶಾಲೆಯ ವಿದ್ಯಾರ್ಥಿ ಹಸನ್ ರಝಾ (10) ಸಾವನ್ನಪ್ಪಿದ ದುರ್ದೈವಿ . ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶಾಲೆಯ ಕ್ರೀಡಾ ಸ್ಪರ್ಧೆ ನಡೆಯುವಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ

ಮಂಜೇಶ್ವರ : ರಸ್ತೆ ದಾಟುತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ ಜಯಂತ (48) ಅಪಘಾತಕ್ಕೀಡಾದ ವ್ಯಕ್ತಿ. ಅನಾರೋಗ್ಯ ಪೀಡಿತರಾದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲು

ಮಂಜೇಶ್ವರ: ಕುಂಬಳೆಯಲ್ಲಿ ಕಾರು ಅಪಘಾತ : ಮಹಿಳೆ ಸಾವು

ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇತರ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಜೇಶ್ವರ : ಜ.19ರಿಂದ ಜ.24ರವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ, ಜ.19ರಂದು ಹೊರೆಕಾಣೀಕೆ ಮೆರವಣಿಗೆ, ಧಾರ್ಮಿಕ ಸಭೆ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ

ಕಾಸರಗೋಡು: ಅನಾರೋಗ್ಯದಿಂದ ಬಳಲುತ್ತಿರುವ ಮೇಘಶ್ಯಾಮ್ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ

ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ. ಈ ಮೊತ್ತವನ್ನು ಭರಿಸಲು ಕುಟುಂಬದ ಸದಸ್ಯರಿಗೆ ಸಾಧ್ಯವಾಗದ ಕಾರಣ

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಕೆವಿ ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಮೊದಲನೇ ಆರೋಪಿಯಾಗಿ ಸಿಪಿಎಂ ನೇತಾರರಾದ ಎ. ಪೀತಾಂಬರನ್, ಎರಡನೇ ಆರೋಪಿಯಾಗಿ ಸಜಿ ಸಿ ಜಾರ್ಜ್ ಎಂಬ ಸಜಿ, ಮೂರನೇ ಆರೋಪಿಯಾಗಿ ಕೆ.ಎಂ. ಸುರೆಶ್, ನಾಲ್ಕನೇ ಆರೋಪಿಯಾಗಿ ಕೆ ಅನಿಲ್ ಕುಮಾರ್ ಎಂಬ ಅಬು, ಐದನೇ ಆರೋಪಿಯಾಗಿ ಜಿಜಿನ್, ಆರನೇ ಆರೋಪಿಯಾಗಿ ಶ್ರೀರಾಗ್ ಎಂಬ ಕೂಟು, ಏಳನೇ ಆರೋಪಿಯಾಗಿ

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ (40) ಸಾವನ್ನಪ್ಪಿದ ದುರ್ದೈವಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮಂಜೇಶ್ವರ : ತೋಡಿಗೆ ಮಗುಚಿದ ಶಾಲಾ ವಾಹನ – ಹಲವರಿಗೆ ಗಾಯ

ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ