ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ
ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ
ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತಂತ್ರಿವರೇಣ್ಯರು, ಅರ್ಚಕವರ್ಗ,
ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುರುಷರ 67 ಕೆ.
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11
ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು ಪಣಪಿಲ ಕಂಬಳ ಸಮಿತಿ ಅಧ್ಯಕ್ಷ, ಯವರಾಜ್ ಜೈನ್, ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್
ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ ಮಾತನಾಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಜೂನಿಯರ್
ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ
ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು ಅತ್ಯಂತ ಅಮಾನವೀಯವಾಗಿ ಕೊಲ್ಲುತ್ತಿರುವ ಇಸ್ರೇಲಿಗೆ ಸರ್ವ ರೀತಿಯ ಸಹಕಾರ ನೀಡುತ್ತಿರುವ ಅಮೆರಿಕ ಮತ್ತು
ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು