ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ
ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ವಾಹನಗಳ ಬಳಕೆ ಸಂದರ್ಭ ಅತಿಯಾದ ಉತ್ಸಾಹವನ್ನು
ಮೂಡುಬಿದಿರೆ: ಮಾಜಿ ಸೈನಿಕ ಹೆನ್ರಿ ಲೋಬೋ (80) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಾಸ್ತಿಕಟ್ಟೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.15 ವರ್ಷಗಳ ಸೈನಿಕನಾಗಿ ಸೇವೆ ಸಲ್ಲಿಸಿದ ಅವರು ನಂತರ 23 ವರ್ಷಗಳ ಕಾಲ ಸಿಂಡಿಕೇಟ್ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಅವರು ಪತ್ನಿ ಅಲಿಸಾ ಲೋಬೋ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್‌ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಪೂಜೆಯು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಬೆಳುವಾಯಿ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ಸವಾಲುಗಳು” ಎನ್ನುವ ವಿಚಾರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹಿರಿಯ ಸಾಹಿತಿ ಸದಾನಂದ
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.
ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ ಅಂಗಡಿಯಿಂದ ಹಾಲು ಹಾಲು ತರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ