ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ
ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ
ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ
ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅವರಿಗೆ ಉಳಿದುಕೊಳ್ಳಲು ಸಮಾಜ ಮಂದಿರದ ವತಿಯಿಂದಲೇ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ
ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ
ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ
ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ
ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು ದಿನೇಶ್ ಶೆಟ್ಟಿ ತಿಮರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನುಮಗುಂದ ಸ್ಥಳಕ್ಕೆ ಭೇಟಿ