ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ
ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.
ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24
ಕುಖ್ಯಾತ ದನಕಳ್ಳ ಮೊಹಮ್ಮದ್ ಯೂನಸ್ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದನಕಳ್ಳ ಮೊಹಮ್ಮದ್ ಯೂನಸ್‌ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ
ಉಡುಪಿ:-ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಿಡಿಗೇಡಿಗಳು ಮೂಟೆ ಗಟ್ಟಲೆ ತ್ಯಾಜ್ಯ ಎಸೆದು ಹೋಗುತ್ತಿರುವ ಘಟನೆ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಯುತ್ತಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಿಡಿ ಗೇಡಿಗಳು ಎಸೆದು ಹೋಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ತಾಲೂಕು ಸಂಘದವರೊಂದಿಗೆ ಸೇರಿ ದಾನಿಗಳಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ
ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡಿ ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.ಅಪಘಾತದಿಂದ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಚೇತ್,ಮೈಸೂರ್ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಸುಮಂತ್ ರವರು
ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್‌ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಲೋಕಾರ್ಪಣೆಗೊಳಿಸಿದರು. ಬಳಿಕ ಸಂಸ್ಥೆಯ ಏಳಿಗೆಗಾಗಿ ಶ್ರೀಗಳು ಆಶೀರ್ವಚಿಸಿ ಶುಭ
ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ