ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು. ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ
ಎಂಜಿನಿಯರಿಂಗ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು
ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್‍ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ ಆರಂಭಗೊಂಡಿರುವುದರಿಂದ ಪರಿಸರದ ಜನರಿಗೆ ಆಕರ್ಷಕ ಬೆಲೆಯಲ್ಲಿ ಒಳ್ಳೆ ಗುಣಮಟ್ಟದ ಬೇಕರಿ ತಿಂಡಿ ತಿನಿಸುಗಳು
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಉಡುಪಿಯಲ್ಲಿ ನಟ ಅರವಿಂದ ಬೋಳಾರ್ ಅವರು ಮತಪ್ರಚಾರ ಮಾಡಿದರು. ಶಿಕ್ಷಕರ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಲೆಂದು ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ. ಅವರನ್ನು ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಹಲವಾರು ಮಂದಿ ಪಣತೊಟ್ಟಿದ್ದಾರೆ. ಡಾ.
ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ
ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ
ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕøತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ
ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ
ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ