“ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಈ ನಿಟ್ಟಿನಲ್ಲಿ ವಿವಿಧ ಆಹಾರ ಪದಾರ್ಥಗಳು ಆಹಾರಗಳನ್ನ ಪ್ರದರ್ಶನಕ್ಕೆ ಇಟ್ಟು ಆಯೋಜಿಸಲಾದ ಈ ಪೌಷ್ಧಿಕ ಮಾಸ ಆಚರಣೆ ಅರ್ಥ ಪೂರ್ಣವಾದದ್ದು ಎಂದು
ಶಿರೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13) ಮೃತ ವಿದ್ಯಾರ್ಥಿಗಳು. ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ. ಇಬ್ಬರಿಗೂ ಅಷ್ಟೇನು ಈಜಲು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯ ಪೊಲೀಸ್ ಉಪನಿರೀಕ್ಷಕ ನಿತ್ಯಾನಂದ(51) ಶಿರ್ವ ಗ್ರಾಮದ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ 3 ವರ್ಷಗಳಿಂದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಸೆ.16ರಂದು ಬೆಳಗ್ಗೆ ಪಾಳಿ ಕರ್ತವ್ಯ ಮುಗಿಸಿ ವಿಶ್ರಾಂತಿಗೆ ತೆರಳಿದ್ದರು. ರಾತ್ರಿ ಮನೆಯಲ್ಲಿ ಊಟದ ನಂತರ ಮಲಗಿದ್ದ ಇವರು, ಬೆಳಗ್ಗೆ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಪತ್ನಿ,
ಉಡುಪಿ ಉಚ್ಚಿಲ ದಸರಾ 2024ರ ಪ್ರಯುಕ್ತ ನಡೆಯಲಿರುವ ಯುವ ನೃತ್ಯೋತ್ಸವದ ಆಡಿಷನ್ ರೌಂಡ್ ಸೆ.22ರಂದು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿದೆ. ಆಡಿಷನ್ ಸುತ್ತಿನ ಸ್ಪರ್ಧಾ ನಿಯಮಗಳು :1. ಒಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನ ಇರತಕ್ಕದ್ದು.2. ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.3. ಒಂದು ತಂಡಕ್ಕೆ 5 ನಿಮಿಷ (4+1)ದ ಸಮಯಾವಕಾಶ ಮಾತ್ರ ನೀಡಲಾಗುವುದು.4. ಆಡಿಷನ್ ಸುತ್ತಿನಲ್ಲಿ ಯಾವುದೇ ಕಾಸ್ಟ್ಯೂಮ್‌ನ (ವೇಷಭೂಷನ)
ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ
ಹೆಬ್ರಿ:ಪೆರ್ಡೂರು ಗೋರೇಲಿನಲ್ಲಿ ಶ್ರೀಯುತ ಹರಿನಾರಾಯಣ ಭಂಡಿ ಯವರ ನಿವಾಸದಲ್ಲಿ ನಿನ್ನೆ ರೀತಿ ರಾತ್ರಿ ಹೊತ್ತು ದಾಳಿ ನಡೆಸಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತು ಕೊಂಡು ಹೋಗುತ್ತಿರುವ ದೃಶ್ಯವು . ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಪೆರ್ಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆಯ ಓಡಾಟವನ್ನು ನೋಡಿದ ಸ್ಥಳೀಯರು ಹೇಳುತ್ತಿದ್ದಾರೆ.ಈ ಭಾಗದಲ್ಲಿ ಮತ್ತೆ ಚಿರತೆ ಕಾಣಿಸಿ ಕೊಳ್ಳುತ್ತಿರುವುದು
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ವಿಠಲ ಬಿ. ಅಂಚನ್ ಉಪಾಧ್ಯಕ್ಷರಾದ ಗೋವಿಂದ ಜಿ. ಕುಂದರ್, ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಜತೆ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್ ಶೆಟ್ಟಿ ಕರ್ನಿರೆ, ಹರೀಶ್ ಶೆಟ್ಟಿ ನಂದಿಮನೆ, ದಿನೇಶ್ ಫಲಿಮಾರು, ಜಗದೀಶ್ ಪಾವಂಜೆ ಫಲಿಮಾರು, ಗೌರವ