Home Archive by category ullala

ಉಳ್ಳಾಲ: ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ – ಸಾಮೂಹಿಕ ಅತ್ಯಾಚಾರ ಯತ್ನ ಶಂಕೆ – ಪೊಲೀಸರಿಂದ ತನಿಖೆ

ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ ಹೊರರಾಜ್ಯದ ಯುವತಿ ನಶೆಯಿಂದ ಸ್ಥಳೀಯ ಮನೆಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ

ಉಳ್ಳಾಲ : ಮರ ಉರುಳಿ ಮನೆ ಛಾವಣಿಗೆ ಅಪಾರ ಹಾನಿ

ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್‌ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ. ಮನೆಯೊಳಗೆ ಮನೆಮಂದಿಯಿದ್ದರೂ ಯಾವುದೇ ಜೀವಹಾನಿಯಿಲ್ಲದೇ ಪಾರಾಗಿದ್ದಾರೆ. ಮರ ನೇರವಾಗಿ ಛಾವಣಿ

ಅಸೈಗೋಳಿ: ರಿಕ್ಷಾ ಚಾಲಕ ಆತ್ಮಹತ್ಯೆ

ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ- 11ರ ಹರೆಯದ ವಿದ್ಯಾರ್ಥಿನಿ ಸಾವು

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ

ನಾಟೆಕಲ್ :ಬಸ್-ಕಾರು ಅಪಘಾತ , ನಾಲ್ವರಿಗೆ ಗಾಯ

ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಉಳ್ಳಾಲ : ಮನವಿ ಸಲ್ಲಿಸಿದ್ದರೂ ಸ್ಪಂಧಿಸದ ಉಳ್ಳಾಲ ನಗರಸಭೆ – ಕುಸಿದುಬಿದ್ದ ಮನೆ ಮಹಡಿ, ಮನೆಮಂದಿಗೆ ಗಾಯ

ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ ಮಸೀದಿ ಸಮೀಪ ನಡೆದಿದೆ. ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ ವಿಧಿವಶ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.