Home Archive by category Uncategorized

ಕಾಪು ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಕೆ.ರಘುಪತಿ ಭಟ್ ಭೇಟಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ

ಪತ್ರಕರ್ತನಿಗೆ ದೂರವಾಣಿ ಮೂಲಕ ಬೆದರಿಕೆ- ಸುಳ್ಯ ಪ್ರೆಸ್ ಕ್ಲಬ್ ಖಂಡನೆ: ಪತ್ರಕರ್ತನಿಂದ ಪೊಲೀಸ್‌ ದೂರು

ಸುಳ್ಯ :ಸುಳ್ಯದ ಸ್ಥಳೀಯ ಅಮರಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು ಮತ್ತು ಪೋಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಪ್ರೆಸ್ ಕ್ಲಬ್‌ ಪದಾಧಿಕಾರಿಗಳು ಮತ್ತುಸದಸ್ಯರು

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ

ಮಾಜೀ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನ

ಕರ್ನಾಟಕದ ಮಾಜೀ ಮುಖ್ಯಮಂತ್ರಿ ಹಾಗೂ ಭಾರತದ ವಿದೇಶಾಂಗ ಸಚಿವರಾಗಿದ್ದ ಸೋಮನಹಳ್ಳಿ ಮಲ್ಲಪ್ಪ ಕೃಷ್ಣ ಅವರು ಮುಂಜಾವ ಎರಡೂವರೆ ಗಂಟೆಗೆ ಬೆಂಗಳೂರು ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದರು. ಕೃಷ್ಣರ ತಂದೆ ಸೋಮನಹಳ್ಳಿ ಮಲ್ಲಪ್ಪನವರು ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಶಾಸನ ಸಭೆಯ ಸದಸ್ಯರಿದ್ದರು. ವಿದೇಶದಲ್ಲಿ ಶಿಕ್ಷಣ ಮುಗಿಸಿದ ಕೃಷ್ಣ ಅವರು ದೇಶಕ್ಕೆ ಹಿಂತಿರುಗಿ ಮದ್ದೂರು ವಿಧಾನ ಸಭಾ ಕ್ಷೇತ್ರದಿಂದ ಮೊದಲು ಗೆದ್ದುದು ಪ್ರಜಾ ಸಮಾಜವಾದಿ ಪಕ್ಷದಿಂದ. ಮುಂದೆ

ಶಯದೇವಿಸುತೆ ಮರವಂತೆಯವರ ಮುಡಿಗೇರಿದ,“ಕರ್ನಾಟಕ ಸಾಧಕ ರತ್ನ ಪ್ರಶಸ್ತಿ

ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್(ರಿ.) ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ(ರಿ.) ಬಳ್ಳಾರಿ ಹಾಗೂ, ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ, “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ” ವು 2024, ನವೆಂಬರ್ 30 ಹಾಗೂ ಡಿಸೆಂಬರ್ 01ರಂದು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಸತತ ಎರಡು ದಿನಗಳ ಕಾಲ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ