Home Archive by category Uncategorized (Page 17)

ಉಡುಪಿಯಲ್ಲಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ

ಅಮೆರಿಕನ್ನರ ಗಮನ ಸೆಳೆದ ಮಮತಾ ಪುಟ್ಟಸ್ವಾಮಿ

ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ ಸ್ಫರ್ಧೆಯಲ್ಲಿ ಮಮತಾ ಪುಟ್ಟಸ್ವಾಮಿ ಅವರು ಪ್ರಶಸ್ತಿ ಪಡೆಯುವ ಮೂಲಕ ತನ್ನ ಪ್ರತಿಭೆಯನ್ನು ಮೆರೆದಿದ್ದಾರೆ.   ಮಿಸೆಸ್ ಇಂಡಿಯಾ ಕನೆಕ್ಟಿಕಟ್ 2018 ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮಮತಾ ಪುಟ್ಟಸ್ವಾಮಿ

ಸಾಮೂಹಿಕ ಅತ್ಯಾಚಾರ ಪ್ರಕರಣ : ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ

ವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್‍ಡಿಪಿಐ ದ.ಕ

ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ಹಿರಿಯ ಜನಪದ ಕಲಾವಿದ ಗುರುವ ಕೊರಗ ನಿಧನ

ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು  ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಗುರುವ ಕೊರಗ, ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ತಮ್ಮ 12ನೇ

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ತಡೆ ವಿಚಾರ : ಹಿಂದೂ ಕಾರ್ಯಕರ್ತರಿದಂದ ಪ್ರತಿಭಟನೆ

ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ : ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ

ತಾಲಿಬಾನ್ ತರ ಯೋಚಿಸಿದರೆ ಮಟ್ಟ ಹಾಕುವುದಕ್ಕೂ ಗೊತ್ತಿದೆ : ಡಾ. ವೈ ಭರತ್ ಶೆಟ್ಟಿ ಹೇಳಿಕೆ

ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು