ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೇನ್ ದ್ವೀಪ ರಾಷ್ಟ್ರಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದೆ. ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಕೀರ್ತಿಯ ಜೊತೆಗೆ ಸಂಪೂರ್ಣ ಹಿಮ್ಮೇಳ ಮುಮ್ಮೇಳವನ್ನು ಹಿಒಂದಿರುವ ಕೀರ್ತಿ ಕೂಡ ಬಹರೈನ್ ದ್ವೀಪ ರಾಷ್ಟ್ರಕ್ಕೆ ಸಲ್ಲುತ್ತದೆ. ಹಾಗಾಗಿ ದ್ವೀಪ ರಾಷ್ಟ್ರದಲ್ಲಿ ಆಗಾಗ್ಗೆ ಅಲ್ಲಲ್ಲಿ ಲಯಬದ್ಧವಾದ ಚೆಂಡೆಯ
ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ. ಸ್ವಾತಂತ್ರ್ಯ ಎಲ್ಲರ ಹಕ್ಕು. ಎಲ್ಲರಿಗೂ ಸೇರಿದ ಈ ಸ್ವಾತಂತ್ರ್ಯ ಲಭಿಸಲು ಅನೇಕ ಮಹನೀಯರ ಕೊಡುಗೆ ಇದೆ.
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್ ಒಂಜಿ ದಿನ ಎಂಬ ಕಾರ್ಯಕ್ರಮ ನಡೆಯಿತು. ಬಾಲೇಶ್ವರ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಟದ ಗದ್ದೆಯಲ್ಲಿ ಕಂಬಳ ಕೋಣ ಇಳಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆಯನ್ನು
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ನಗರವನ್ನು ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ
ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ
ಕೇರಳ ಗಡಿಭಾಗ ತಲಪಾಡಿಯ ಚೆಕ್‍ಪೋಸ್ಟ್ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಲಾಯಿತು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರ ನೀಡಿದರು. ಬಂಧಿತರನ್ನು ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಶಿಹಾಬ್ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಪೂರೈಕೆ ಮಾಡುವ ವೃತ್ತಿಯಲ್ಲಿದ್ದ. ರಿಯಾಜ್ ಎಂಬಾತ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಚಿಕನ್ ಸಪ್ಲೈ ಕೆಲಸ ಮಾಡುತ್ತಿದ್ದ, ಇನ್ನೋರ್ವ ಬಂಧಿತ
ದ.ಕ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಮಸೂದ್ ಮತ್ತು ಸುರತ್ಕಲ್‌ನ ಫಾಝಿಲ್ ಕೊಲೆ ಪ್ರಕರಣವನ್ನು ಕೂಡ ಪ್ರವೀಣ್ ಪ್ರಕರಣದಂತೆ ಎನ್‌ಐಎ ಗೆ ವಹಿಸಿ ಮುಖ್ಯ ಮಂತ್ರಿ ರಾಜ ಧರ್ಮ ಪಾಲಿಸಲಿ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಆಗ್ರಹಿಸಿದ್ದಾರೆ.ಯಾವುದೇ ಕೊಲೆಯು ಸಮರ್ಥನೀಯವಲ್ಲ ಮೂರು ಕೊಲೆಯು ಖಂಡನೀಯವಾಗಿದೆ.ಶಾಂತಿಯಾಗಿದ್ದ ದ.ಕ ಜಿಲ್ಲೆಯನ್ನು RSS ನ ಅಂಗ ಸಂಸ್ಥೆ ಭಜರಂಗದಳದ ಕಾರ್ಯಕರ್ತರು ಕಳಂಜದ ಮಸೂದ್ ನನ್ನು
ಸಚಿವ ಅಂಗಾರ ಅವರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿ .ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದರು. ಸುಳ್ಯ ಬೆಳ್ಳಾರೆಯ ಮುಖ್ಯರಸ್ತೆ ಕಲ್ಲೋಣಿ ಎಂಬಲ್ಲಿ ಬಹಳ ವರ್ಷ ದಿಂದ ರಸ್ತೆ ಹದಗೆಟ್ಟು ಹೋದ ಕಾರಣದಿಂದ ಒಂದೂವರೆ ಕಿಲೋ ಮೀಟ ರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಚಿವರ ಒಪ್ಪಿಗೆ ಪಡೆದು ಕಾಂಕ್ರಿಟೀಕರಣ ಮಾಡಲು ತೀರ್ಮಾನ ತೆಗೆದುಕೊಳ್ಳುವುದು. ಎಂದು ಬೆಳ್ಳಾರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.ಅವರು ಕಾಪುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಬೆಳ್ತಂಗಡಿ : ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಈಚೆಗೆ ನಿಧನರಾದ ಪಿ.