Home Archive by category Uncategorized (Page 19)

“ಯಾರಿಗೂ ಹೇಳ್ಬೇಡಿ” – ಸಚಿವ ಸ್ಥಾನ ಹೋದ್ರು ಪರವಾಗಿಲ್ಲ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆಯಿತು ಮಹಿಳೆಯ ಅಂಗಾಂಗ ದಾನ

ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗವನ್ನು ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದು, ಇಂದು ವೈದ್ಯರು ಅಂಗಾಂಗವನ್ನು ಬೇರ್ಪಡಿಸಿ ಚೆನೈ, ಬೆಂಗಳೂರು, ಮತ್ತು ಮಣಿಪಾಲ ಮತ್ತು ಮಂಗಳೂರು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಯಿತು. ಈ ಬಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಉದಯ್ ಕುಮಾರ್ ಕೆ ಅವರು ಮಾಹಿತಿ ನೀಡಿ, ಕಳೆದ ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಕಿನ್ನಿಗೋಳಿ

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30  ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್

ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್  ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಕಡಬದಲ್ಲಿ ಎರಡು ಕಾರುಗಳ ನಡುವೆ ಅಪಘಾತ: ಇಬ್ಬರು ಸ್ಥಿತಿ ಗಂಭೀರ

ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ ಕಡೆಗೆ ಹೊಗುತ್ತಿದ್ದು. ಅಲ್ಟೋ ಕಾರು ಕೆ.ಎ 21 .ಪಿ.2263 ಉಪ್ಪಿನಂಗಡಿಯಿಂದ ಕಡಬದ ಕಡೆಗೆ

DR. KIRAN KUMAR MANAGING DIRECTOR OF LALITHAA JEWELLERY DISTRIBUTE FOOD KIT ON HIS BIRTHDAY CELEBRATION

ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಜುವೆಲರ್ಸ್‍ನ ಎಲ್ಲಾ ಬ್ರಾಂಚ್‍ನ ಮುಂಭಾಗ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಕಿಟ್ ವಿತರಿಸಲಾಯಿತು ಅಂತೆಯೇ

ಎಸ್.ಸಿ.ಡಿ.ಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್‍ಬೈಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ

ಆಶ್ವಾಸನೆಗೆ ಸೀಮಿತವಾಗಿರುವ ಗುಜ್ಜರಕೆರೆ -ಅರೆಕೆರೆ ಬೈಲಿನಲ್ಲಿ ಮತ್ತೆ ಡ್ರೈನೇಜ್ ಸಮಸ್ಯೆ

ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು ದಶಕಗಳಿಂದ ಈ ಸಮಸ್ಯೆ ವಿಪರೀತವಾಗಿ ಬೆಳೆಯುತ್ತಿದ್ದು, ಇಲ್ಲಿಯವರೆಗೆ ಇದಕ್ಕೆ ಪರಿಹಾರ

ದಲಿತ ಕವಿ ಡಾ. ಸಿದ್ದಲಿಂಗಯ್ಯ ರವರಿಗೆ ಗೌರವಪೂರ್ಣ ವಿದಾಯ

ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ

ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ