ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ
ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು
ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗವನ್ನು ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದು, ಇಂದು ವೈದ್ಯರು ಅಂಗಾಂಗವನ್ನು ಬೇರ್ಪಡಿಸಿ ಚೆನೈ, ಬೆಂಗಳೂರು, ಮತ್ತು ಮಣಿಪಾಲ ಮತ್ತು ಮಂಗಳೂರು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಯಿತು. ಈ ಬಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಉದಯ್ ಕುಮಾರ್ ಕೆ ಅವರು ಮಾಹಿತಿ ನೀಡಿ, ಕಳೆದ ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಕಿನ್ನಿಗೋಳಿ
ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30 ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್
ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ ಕಡೆಗೆ ಹೊಗುತ್ತಿದ್ದು. ಅಲ್ಟೋ ಕಾರು ಕೆ.ಎ 21 .ಪಿ.2263 ಉಪ್ಪಿನಂಗಡಿಯಿಂದ ಕಡಬದ ಕಡೆಗೆ
ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಜುವೆಲರ್ಸ್‍ನ ಎಲ್ಲಾ ಬ್ರಾಂಚ್‍ನ ಮುಂಭಾಗ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಕಿಟ್ ವಿತರಿಸಲಾಯಿತು ಅಂತೆಯೇ