ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಗೊನ್ಝಾಗ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ ಫ್ರೀಸ್ಟೈಲ್‌ನಲ್ಲಿ ಮತ್ತು 50 ಮೀ. ಬ್ರೆಸ್ಟ್‌ಸ್ರೋಕ್ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಪಡೆದರು. ಐದನೇ ತರಗತಿಯ ಸುದೀಪ್ತಿ ಸುನಿಲ್ 11 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ 100 ಮೀ ಫ್ರೀಸ್ಟೈಲ್‌ನಲ್ಲಿ ಬೆಳ್ಳಿ ಮತ್ತು 50 ಮೀ. ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 11 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಐದನೇ ತರಗತಿಯ ಅವನೀಶ್ ನಾಯಕ್ ಸುಜೀರ್ 200 ಮೀ ವೈಯಕ್ತಿಕ ಮೆಡ್ಲಿಯಲ್ಲಿ ಬೆಳ್ಳಿಪದಕ, 50 ಮೀ. ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂವರು ಪದಕ ವಿಜೇತ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು. ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಪ್ರಾಂಶುಪಾಲರಾದ ರೆ.ಫಾ. ಮೆಲ್ವಿನ್ ಅನಿಲ್ ಲೋಬೊ ಮತ್ತು ಸಿಬ್ಬಂದಿಗಳು ಈ ಅಪೂರ್ವ ಸಾಧನೆಗಾಗಿ ಎಲ್ಲಾ ಪದಕ ವಿಜೇತರನ್ನು ಅಭಿನಂದಿಸಿದ್ದಾರೆ.