ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ : ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಗೆ ಕೆ ಎಚ್ ಸಿಸಿ ಎಲ್ 2022 ಪ್ರಶಸ್ತಿ

ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ ಅಕ್ಷಯ್ ಮಚ್ಚೇಂದ್ರ ಅವರು ಪಾಲ್ಗೊಂಡಿದ್ದರು.

ಎಲ್ಲಾ ತಂಡಗಳು ಒಟ್ಟುಗೂಡಿ 1, 20, 000 ರೂ. ಮೊತ್ತವನ್ನು ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ನಿಧಿಗೆ ದೇಣಿಗೆಯಾಗಿ ನೀಡಿದರು. ಈ ಉದಾತ್ತ ಕಾರ್ಯವು ಹೆಚ್ಚು ಮೆಚ್ಚುಗೆ ಪಡೆದಿದೆ. ಚೆಕ್ ಅನ್ನು ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ವಿಭಾಗದ ಮುಖ್ಯಸ್ಥರಾದ ಡಾ.ವಾಸುದೇವ ಭಟ್ ಅವರಿಗೆ ಹಸ್ತಾಂತರಿಸಲಾಯಿತು. ಕೆ ಎಂ ಸಿ ಡೀನ್ ಡಾ. ಶರತ್ ಕೆ ರಾವ್ , ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿ ಓ ಓ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಡಾ ಕೀರ್ತಿನಾಥ್ ಬಲ್ಲಾಳ, ಶ್ರೀ ಸಚಿನ್ ಕಾರಂತ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ನಲ್ಲಿ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಅವರು ವಿಜೇತರಾಗಿ ಉಡುಪಿ ಎಸ್ ಪಿ 11 ರನ್ನರ್ ಆಪ್ ಪ್ರಶಸ್ತಿ ಪಡೆದರು. ಪ್ರಶಾಂತ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಕಾರ್ತಿಕ್ ಅವರು ಉತ್ತಮ ದಾಂಡಿಗ ಮತ್ತು ಸಿದ್ದೇಶ್ ಅವರು ಉತ್ತಮ ದಾಳಿಗಾರ ಪ್ರಶಸ್ತಿ ಪಡೆದರು.

Related Posts

Leave a Reply

Your email address will not be published.