ಕುಕ್ಕೆ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಟಿ ಮಹೋತ್ಸವ: ನ.26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ
![](http://v4news.com/wp-content/uploads/2024/11/Capture-1.jpg)
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಶ್ರೀ ದೇವಳದಲ್ಲಿ 2024-25ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ನವೆಂಬರ್ 26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾಧಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ.ಭಕ್ತಾಧಿಗಳು ಸಹಕರಿಸುವಂತೆ ಶ್ರೀ ದೇವಳದ ಆಡಳಿತ ಮಂಡಳಿ ತಿಳಿಸಿದೆ.