ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯ ಹತ್ಯೆ

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಮಾತನಾಡಿಸಿದವರಂತೆ ಮಾಡಿ ಏಕಾಏಕಿ ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ದೊರೆತಿದ್ದು, ಅವರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.