Homeಕರಾವಳಿಕೋಳಿಅಂಕ ವಿಚಾರ: ಅಶೋಕ್ ಕುಮಾರ್ ರೈ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಕೋಳಿಅಂಕ ವಿಚಾರ: ಅಶೋಕ್ ಕುಮಾರ್ ರೈ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಕೋಳಿಅಂಕ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪೋಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.

ಪುತ್ತೂರು :ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಢಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಮುರಳೀಧರ ರೈ ಎಂಬವರ ಜಾಗದಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ ಪೋಲೀಸರು ಕೋಳಿ ಅಂಕವನ್ನು ತಡೆಯಲು ಮುಂದಾದ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಳಿ ಅಂಕವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಟ್ರೇರಣೆ ನೀಡಿದ ಹಿನ್ನಲೆಯಲ್ಲಿ ವಿಟ್ಲ ಪೋಲೀಸರು ಅಶೋಕ್ ಕುಮಾರ್ ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶಾಸಕ ಸೇರಿದಂತೆ 16 ಜನರ ವಿರುದ್ಧ ಬಿಎನ್ಎಸ್ ಕಲಂ 189(2), 49,221,223,190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಪೋಲೀಸ್ ಪ್ರಕರಣವನ್ನು ಶಾಸಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಹಿನ್ನಲೆಯಲ್ಲಿ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments