ಚಿಕ್ಕಮಗಳೂರು : ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರವೇಶ ನಿಷೇಧ – ಜಿಲ್ಲಾಧಿಕಾರಿ ಮೀನಾ ನಾಗರಾಜ್

ಚಿಕ್ಕಮಗಳೂರು: ಶೃಂಗೇರಿ, ನರಸಿಂಹರಾಜಪುರ, ಮೂಡಿ ಗೆರೆ, ಕಳಸ ಕುದುರೆಮುಖ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಜು.22ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು ಇಲ್ಲಿಗೆ ತೆರಳುವ ಮಾರ್ಗ ಕಿರಿದಾಗಿದ್ದು ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಅಗತ್ಯ ವಾಹನಗಳನ್ನು ಹೊರತುಪಡಿಸಿ ಹೊರಗಿನಿಂದ ಬರುವ ವಾಹನಗಳಿಗೆ ಜು.22ರ ವರೆಗೆ ನಿರ್ಬಂಧ ವಿಧಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

add - ocean andhra food

Related Posts

Leave a Reply

Your email address will not be published.