ದೆಹಲಿ: ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಚಿಂತನ್ ಎಸ್. ಶೆಟ್ಟಿಗೆ 1 ಚಿನ್ನ, 4 ಬೆಳ್ಳಿ ಪದಕ
ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್ ಈಜು ಸ್ಪರ್ಧೆಯಲ್ಲಿ ಕ್ಲಬ್‌ನ ಸದಸ್ಯರಾದ ಚಿಂತನ್ ಎಸ್ ಶೆಟ್ಟಿ ಅವರು 17 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಗೆದ್ದು ನಮ್ಮ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.ಇವರು 50 ಮೀಟರ್ ಫ್ರಿಸ್ಟೈಲ್‌ನಲ್ಲಿ ಚಿನ್ನ, 100 ಮೀಟರ್ ಫ್ರಿಸ್ಟೈಲ್‌ಬಲ್ಲಿ ಬೆಳ್ಳಿ, 50ಮೀಟರ್ ಬಟರ್ ಫ್ಲೈನಲ್ಲಿ ಬೆಳ್ಳಿ ಹಾಗೂ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ 4*100 ಮೀಟರ್ ಮಿಡ್ಲೆ ರಿಲೆ ಮತ್ತು 4*100 ಮೀಟರ್ ಫ್ರೀಸ್ಟೈಲ್ ರಿಲೆಗಳಲ್ಲಿ ಬೆಳ್ಳಿ ಪದಕಗಳನ್ನು ಗಳಿಸಿರುತ್ತಾರೆ. ಈ ಮೂಲಕ ತಮ್ಮ ಅದ್ಭುತ ಪ್ರದರ್ಶನದಿಂದ ಕರ್ನಾಟಕ ರಾಜ್ಯ ತಂಡವು 17ರ ಬಾಲಕರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಚಿಂತನ್ ಎಸ್. ಶೆಟ್ಟಿ ಅವರು ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಶ್ರೀ ರಾಮಕೃಷ್ಣ ಹೈಸ್ಕೂಲ್‌ನ ವಿದ್ಯಾರ್ಥಿಯಾಗಿದ್ದಾರೆ. ಕ್ಲಬ್‌ನ ಹಿರಿಯ ಈಜು ತರಬೇತುದಾರರಾದ ಎಂ. ಶಿವಾನಂದ ಗಟ್ಟಿ ಅವರ ಮಾರ್ಗದರ್ಶನದಲ್ಲಿ ಮುಖ್ಯ ತರಬೇತುದಾರರಾದ ಶಿಶಿರ್ ಎಸ್. ಗಟ್ಟಿ, ಕೀರ್ತನ್ ಎಸ್. ಶೆಟ್ಟಿ. ಚೇತನ್ ಎಸ್. ಶೆಟ್ಟಿ, ರಾಜೇಶ್ ಖಾರ್ವಿ ಬೆಂಗ್ರೆ ಅವರಿಂದ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ.