ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಮಳೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣದ ಬಗ್ಗೆ ಮಾತನಾಡಿದ ಅವರು ಕೇಸ್ ಸಂಬಂಧ ಮಾಹಿತಿ ಪಡೆಯುತ್ತೇನೆ. ಈಗಾಗಲೇ ಎಫ್‍ಐಆರ್ ಆಗಿದೆ, ಡಿಸಿಪಿ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ ಎಂದ ಅವರು, ಯಾರಾದ್ರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನು ಕ್ರಮ ಕೈಗೆತ್ತಿಕೊಳ್ಳಲು ಅವಕಾಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜಾ, ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಅಶೋಕ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರದ ಪೊಲೀಸ್ ಆಯುಕ್ತ ಕುಲ್‍ದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.