ಕೊಲಂಬೊ : ಭಾರತೀಯ ಮೀನುಗಾರನ್ನುಬಂಧಿಸಿದ ಶ್ರೀಲಂಕಾ ನೌಕಾಪಡೆ

  • ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ ಕಾರ್ಯಾಚರಣೆ ನಡೆಸಿ ಭಾರೀಯ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ಕಂಕಸಂತುರೈ ಬಂದರಿಗೆ ಕರೆ ತರಲಾಗಿದ್ದು, ಮೀನುಗಾರಿಕಾ ನಿರ್ದೇಶಕರಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.ಇನ್ನು ಈ ವರ್ಷಾರಂಭದಿಂದ ಇಲ್ಲಿವರೆಗೆ ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಒಟ್ಟು 252 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಪಾಕ್ ಜಲಸಂಧಿಯಲ್ಲಿ ಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಲ್ಲದೆ, ಅವರ ದೋಣಿಗಳನ್ನೂ ಹಲವು ಬಾರಿ ವಶಪಡಿಸಿಕೊಂಡಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರಕ್ಕೆ ಸೋಮವಾತ ಮಾಹಿತಿ ನೀಡಿದ್ದು, ಲಂಕಾದಿಂದ ಮೀನುಗಾರರು ಮತ್ತು ಅವರ ದೋಣಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Related Posts

Leave a Reply

Your email address will not be published.