ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಮೆ ಕೈ ಹಾಕುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಇದನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಇಂಥಹ ನೀಚ‌ಕೃತ್ಯಕ್ಕೆ ಕೈ ಹಾಕುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ಅಶೋಕ್ ರೈ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದರು.

Related Posts

Leave a Reply

Your email address will not be published.