ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ : ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ ರಾಮಯ್ಯ ಹೆಜ್ಜೆ ಹಾಕಿದರು. ಗುಂಡ್ಲುಪೇಟೆಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ಪಡೆಯೊಂದಿಗೆ ರಕ್ಷಾ ರಾಮಯ್ಯ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ ರಾಮಯ್ಯ, ಭಾರತ್ ಜೋಡೋ ಯಾತ್ರೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಕ್ರಿಯವಾಗಿ ಭಾಗಿಯಾಗಿದ್ದು, ಎಲ್ಲಾ ರಾಜ್ಯಗಳಲ್ಲಿ ಯುವ ಸಮೂಹ ಉತ್ಸಾಹದಿಂದ ಪಾಲ್ಗೊಳ್ಳಲಿದೆ. ಎಲ್ಲಾ ವರ್ಗದ ಯುವ ಜನರಿಂದ ರಾಹುಲ್ ಗಾಂಧಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದರು. ಆಂಧ್ರಪ್ರದೇಶ ಯುವ ಕಾಂಗ್ರೆಸ್ ಘಟಕದ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಯಾತ್ರೆಗೆ ಭಾರೀ ಜನ ಬೆಂಬಲ ದೊರೆತಿದ್ದು, ಕಾಂಗ್ರೆಸ್ ನ ನೆಲೆಯಾಗಿದ್ದ ಆಂಧ‍್ರಪ್ರದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ತನ್ನ ವಿಜಯ ಪತಾಕೆ ಹಾರಿಸಲಿದೆ ಎಂದು ಹೇಳಿದರು.

Related Posts

Leave a Reply

Your email address will not be published.