ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ನಾಮಪತ್ರ ಸಲ್ಲಿಕೆ
ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ ರಾಜಾರಾಮ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಸೇರಿದಂತೆ ಕಾರ್ಯಕರ್ತರು ಅಭಿಮಾನಿಗಳು ಮೆರವಣಿಗೆಯಲ್ಲಿ ಉಪಸ್ಥಿತರಿದ್ದಾರೆ.