ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯ ಕಾರ್ಯಕರ್ತರು ಹಾಜರಿದ್ದರು.

Related Posts

Leave a Reply

Your email address will not be published.