ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿ. ಮೊದಲ ಹಂತದ ಪಟ್ಟಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಸೇರಿ ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಮಂಗಳೂರು ಯು.ಟಿ. ಖಾದರ್, ಸುಳ್ಯ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಕೃಷ್ಣಪ್ಪ ಜಿ., ಬಂಟ್ವಾಳದಿಂದ ರಮಾನಾಥ್ ರೈ, ಮೂಡುಬಿದಿರೆ ಕ್ಷೇತ್ರದಿಂದ ಮಿಥುನ್ ರೈ,ಬೆಳ್ತಂಗಡಿ ಕ್ಷೇತ್ರದಿಂದ ರಕ್ಷಿತ್ ಶಿವರಾಮ್ ಅವರಿಗೆ ಟಿಕೆಟ್ ನೀಡಲಾಗಿದೆ.ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆ,ಕುಂದಾಪುರ ಕ್ಷೇತ್ರಕ್ಕೆ ಎಂ.ದಿನೇಶ್ ಹೆಗ್ಡೆ,ಬೈಂದೂರು ಕ್ಷೇತ್ರದಿಂದ ಗೋಪಾಲ್ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.ಕುತೂಹಲ ಹುಟ್ಟಿಸಿರುವ ಉಡುಪಿ, ಕಾರ್ಕಳ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು ಕ್ಷೇತ್ರದ ಅಭ್ಯರ್ಥಿಯನ್ನು ಈ ಪಟ್ಟಿಯಲ್ಲಿ ರಿವೀಲ್ ಮಾಡಿಲ್ಲ.