ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರುವದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಾಂಗ್ರೆಸ್ ಮುಖಂಡರಾದ ರಮಾನಂದ ಪೂಜಾರಿ, ಟಿ.ಕೆ.ಸುಧೀರ್, ಕಾರ್ಪೋರೇಟರ್‍ಗಳಾದ ಶಶಿಧರ್ ಹೆಗ್ಡೆ, ಪ್ರವೀಣ್‍ಚಂದ್ರ ಆಳ್ವಾ, ಸೇರಿದಂತೆ ಮೊದಲಾದವರು ಉಪಸ್ಥತರಿದ್ದರು