ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ: ಗಾಂಧಿ, ವಾಜಪೇಯಿ ಸ್ಮಾರಕಗಳಿಗೆ ಭೇಟಿ, ನಮನ

ಮೂರನೆಯ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿ, ನಂತರ ದಿಲ್ಲಿಯಲ್ಲಿನ ಸದೈವ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮಿಸಿದರು. ತದನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಗುಚ್ಛವಿರಿಸಿ, ಗೌರವ ಸಲ್ಲಿಸಿದರು.



ಇಂದು ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ತಮ್ಮ 30 ಮಂದಿ ಸಂಪುಟ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಎಲ್ಲರಿಗೂ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ್ ಸಿಂಘೆ ಹಾಗೂ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಭಾಗವಹಿಸಲಿದ್ದಾರೆ.