ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು : ಸಾಧು ಸಂತರಿಂದ ಸುದ್ದಿಗೋಷ್ಟಿ

ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಸಂತರು ತಿಳಿಸಿದ್ದಾರೆ.
