ಡಿ. ದೇವರಾಜ ಅರಸರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ಆ.20ರ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವರು ಹಿಂದುಳಿದ ವರ್ಗಗಳ ವೃತ್ತಿ ಕುಲಕಸುಬುಗಳ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದರು.ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್,
ಸಹಾಯಕ ಆಯುಕ್ತ ಮದನ್ ಮೋಹನ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿ
