ವಿಟ್ಲದಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ
ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಕಚೇರಿಯಿಂದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಮನವಿ ಸಲ್ಲಿಸಿದರು.
ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು,ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು ವಿಟ್ಲ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಮೀನಾಕ್ಷಿ ನೆಲ್ಲಿಗುಡ್ಡೆ, ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೋಳ್ಮಾರ್,ಜಗದೀಶ್ ಮಂಜನಾಡಿ ಮೊದಲಾದವರು ಭಾಗವಹಿಸಿದ್ದರು.