ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ
ದಿನಾಂಕ: 05-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ. ಹಾಕೆ , ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು.
ಗೃಹರಕ್ಷಕರ ಕುಂದು ಕೊರತೆಗಳ ಬಗ್ಗೆ ವಿಚಾರಿಸುವಂತೆ ಸಮಾದೇಷ್ಟರಿಗೆ ಸೂಚನೆ ನೀಡಿದರು. ದ ಕ ಜಿಲ್ಲೆಯಲ್ಲಿ ಪೌರ ರಕ್ಷಣಾ ಪಡೆಗಳನ್ನು ಇನ್ನಷ್ಟು ಮುನ್ನೆಲೆಗೆ ತರಲು ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಸಮಾದೇಷ್ಟರಿಗೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣೆ ಪಡೆ ಚೀಫ್‍ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು, ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಹಾಗೂ ಗೃಹರಕ್ಷಕರು ಉಪಸ್ಥಿತರಿದ್ದರು.