ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರುʼ ಹತ್ಯೆ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ NIA
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ, ಜೊತೆಗೆ ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ.ಮಾಹಿತಿದಾರರು [email protected] ಅಥವಾ ದೂರವಾಣಿ ಸಂಖ್ಯೆ 080-29510900/8904241100 ಅಥವಾ ಪೊಲೀಸ್ ಅಧೀಕ್ಷಕರು, ರಾಷ್ಟಿಯ ತನಿಖಾ ದಳ (ಎನ್‌ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071 ಈ ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‌ಐಎ ತಿಳಿಸಿದೆ.