ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡಿದ್ದಾರೆ.
