ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ – ಆಟೋ ರಿಕ್ಷಾ ಚಾಲಕನ ಮೇಲೆ ತಂಡದಿಂದ ಹಲ್ಲೆ

ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ಬುಧವಾರ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ನಾಲ್ವರ ತಂಡವೊಂದು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪವೇ ರಿಕ್ಷಾವನ್ನು ತಡೆದು ಆಶಿಕ್ ಮೇಳೆ ಯದ್ವಾತದ್ವಾ ಹಲ್ಲೆ ಗೈದಿದೆ. ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published.