ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ

ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ.
ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ ಸಂಸ್ಥೆಯನ್ನು ಗ್ಲೋಬಲ್ ಸ್ಕೋಲರ್ ಫೌಂಡೇಷನ್ -2022ನೇ ಸಾಲಿನ ಉದ್ಯೋಗ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಮಹಾರಾಷ್ಟ್ರ ಪುಣೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪದ್ಮವಿಭೂಷಣ ಪ್ರಶಸ್ತಿ ವಿಜೇತ ಪದ್ಮಜ ರೆಡ್ಡಿಯವರು ಪ್ರದಾನ ಮಾಡಿದರು. ಮುಖ್ಯ ಅತಿಥಿ ಹಿಂದಿ ಚಿತ್ರ ನಟಿ ಲಕ್ಷ್ಮಿ ನಾರಾಯಣ ತ್ರಿಪಾಠಿ, ಗ್ಲೋಬಲ್ ಫೌಂಡೇಶನ್ ಛೇರ್ಮನ್, ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕದಿಂದ ಹೋಮ್ ನರ್ಸಿಂಗ್ ಸೇವಾ ಸಂಸ್ಥೆಯಲ್ಲಿ ಪ್ರಥಮ ಆಯ್ಕೆಯಾಗಿದ್ದು ವಿಶೇಷವಾಗಿತ್ತು. ಸಂಸ್ಥೆಯ ನಿರ್ದೇಶಕರಾದ ಲಯನ್ ಅನಿಲ್ ದಾಸ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಮಹೇಶ್ ಕುಮಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಾರ್ಯಕ್ರಮ ದಲ್ಲಿ ದೇಶ ವಿದೇಶದ ಹಲವಾರು ಪ್ರತಿಷ್ಠಿತ ಕಂಪನಿಗಳು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ.. ಪ್ರಶಸ್ತಿಯನ್ನು ಪಡೆದುಕೊಂಡಿದೆ.