ದೇರಳಕಟ್ಟೆಯ ಕಾನೆಕೆರೆ ಗುಡ್ಡ ಕುಸಿತ : ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ

ಉಳ್ಳಾಲ: ಮಳೆಯಿಂದ ಹಾನಿಗೀಡಾದ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ತುರ್ತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.
ಬೋರುಗುಡ್ಡೆ ಎರಡು ಮನೆಗಳ ಮೇಲೆ ಗುಡ್ಡೆ ಜರಿತವಾಗಿ ಹಾನಿ, ರೆಂಜಾಡಿಯ ಪಾಲೆದಡಿ ಮಸೀದಿ ಬಳಿ ಹಾನಿ, ಕೊಳಕೆಬೈಲ್ ಗುಡ್ಡ ಜರಿತ ಹಾಗೂ ಕಾನಕೆರೆ ಬಳಿ ಪೆಟ್ರೋಲ್ ಪಂಪ್ ಹಿಂಭಾಗದ ಒಂದು ಭಾಗ ಜರಿತ ಉಂಟಾಗಿದೆ. ಇವೆಲ್ಲವನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ,ತಾಲೂಕು ತಹಸೀಲ್ದಾರ್, ಕಂದಾಯ ಇಲಾಖೆಗೆ ಕನಿಷ್ಟ ಪರಿಹಾರವನ್ನು ತುರ್ತಾಗಿ ಒದಗಿಸುವಂತೆ ನಿರ್ದೇಶಿಸುವುದಾಗಿ ಹಾಗೂ ಹಾನಿಗೀಡಾದ ಪ್ರದೇಶಗಳ ದುರಸ್ತಿಗೆ ರೂಪುರೇಷೆಗಳನ್ನು ತಯಾರಿಸುವಂತೆಯೂ ಸೂಚಿಸುವುದಾಗಿ ತಿಳಿಸಿದರು. ಈ ಸಂದರ್ಭ ಬೆಳ್ಮ ಗ್ರಾ.ಪಂ ಅಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಸದಸ್ಯೆ ಪುಷ್ಪಲತ ರೈ, ಸ್ಥಳೀಯರಾದ ಹನಸ್ ಬ್ರೈಟ್, ರೋಹಿತ್ ಶೆಟ್ಟಿ, ಹಸನ್, ಅಬ್ದುಲ್ ಖಾದರ್ ಕೆ.ಎನ್.ಎಚ್ ಉಪಸ್ಥಿತರಿದರು.