ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ

ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.

ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೂ ಸಿಲಿಂಡರ್ ಪೂರ್ತಿ ಸೋರಿಕೆಯುಂಟಾಗಿ ಸ್ಟಾಲ್ ಭಾಗಶ: ಸುಟ್ಟುಹೋಗಿದೆ. ಘಟನೆಯಿಂದ ಸಾರ್ವಜನಿಕರು ಹಾಗೂ ಬಶೀರ್ ಪವಾಡಸದೃಶವಾಗಿ ಪಾರಾಗಿದ್ದಾರೆ. ಸಾವಿರಾರು ರೂ. ನಷ್ಟ ಉಂಟಾಗಿದೆ.

Related Posts

Leave a Reply

Your email address will not be published.