ಧರ್ಮಸ್ಥಳ: ನೇತ್ರಾವತಿ ನದಿಯ ಅಂಬ್ಯ ದಡದಲ್ಲಿ ವ್ಯಕ್ತಿಯ ಶವ ಪತ್ತೆ
ಧರ್ಮಸ್ಥಳದ ನೇತ್ರಾವತಿ ನದಿಯ ತೀರದಲ್ಲಿ ಅನಾಥ ಶವ ಪತ್ತೆಯಾದ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿಯೊಬ್ಬರು ನದಿಯಲ್ಲಿ ಮೃತದೇಹ ಕಂಡು ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದರು.
ಸ್ಥಳಕ್ಕೆ ಬಂದ ತಂಡದವರು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿಯನ್ನು ನೀಡಿದರು. ಧರ್ಮಸ್ಥಳ, ಬೆಳಾಲು, ಉಜಿರೆಯ ವಿಪತ್ತು ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದರು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.