ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು.
ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ ವಿಜೃಂಭಣೆಯಿoದ ನಡೆದಿದ್ದು ಸಾಗರೋಪಾದಿಯಲ್ಲಿಜನರು ಮಂಜುನಾಥ ಸ್ವಾಮಿಯ ಸನ್ನಿಧಿಗೆ ಭಕ್ತಿ ಭಾವದೊಂದಿಗೆ ತೆರಳಿದರು.50 ಯಕ್ಷಗಾನ ವೇಷಧಾರಿಗಳು, ವಿವಿಧ ಭಜನಾ ಮಂಡಳಿಗಳು ಪಾದಯಾತ್ರೆಯ ವಿಷೇಶ ಆಕರ್ಷಣೆಯಾಗಿತ್ತು. ಮಕ್ಕಳು, ವೃದ್ಧರು, ಗಣ್ಯವ್ಯಕ್ತಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು,ವಿದ್ಯಾರ್ಥಿಗಳು, ಅಧ್ಯಾಪಕರು ಸೇರಿದಂತೆಕ್ಷೇತ್ರದ ಹಲವಾರು ಭಕ್ತಾಧಿಗಳು ಕಾಲ್ನಡಿಗೆಯಲ್ಲಿ ಪಾಲ್ಗೊಂಡಿದ್ದರು.
ಪಾದಯಾತ್ರೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ್ ಪರಿಷತ್ ಶಾಸಕರುಗಳಾದ ಕೆ.ಪ್ರತಾಪ್ ಸಿಂಹ ನಾಯಕ್, ಕೆ.ಹರೀಶ್‌ಕುಮಾರ್, ಪದಯಾತ್ರೆ ಸಮಿತಿಯ ಸಂಚಾಲಕಾರದ ಪೂರನ್ ವರ್ಮ, ಗ್ರಾಮಾಭಿವೃದ್ಧಿಯೋಜನೆಯಕಾರ್ಯನಿರ್ವಾಹಕ ನಿರ್ದೇಶಕಡಾ. ಎಲ್. ಹೆಚ್.ಮಂಜುನಾಥ್, ಅಖಿ¯ ಕರ್ನಾಟಕಜಾಗೃತಿ ವೇದಿಕೆಯರಾಜ್ಯಾಧ್ಯಕ್ಷರಾಮಸ್ವಾಮಿ ಹಾಗೂ ಮತ್ತಿತರಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.
ಯಾತ್ರೆಗೆ ಅನೇಕ ಮುಂಜಾಗೃತಾಕ್ರಮವನ್ನು ವಹಿಸಿದ್ದು, ರಕ್ಷಣಾದೃಷ್ಟಿಯಿಂದಆರಕ್ಷಕ ಪಡೆ, ಆ್ಯಂಬುಲೆನ್ಸ್ ವ್ಯವಸ್ಥೆ ಹಾಗೂ ಅಲ್ಲಲ್ಲಿ ಬಾಯಾರಿಕೆಗೆತಂಪು ಪಾನೀಯ ವ್ಯವಸ್ಥೆ ಮಾಡಲಾಗಿತ್ತು.ಎಲ್ಲಾ ವ್ಯವಸ್ಥೆಗಳನ್ನು ಸ್ವಯಂ ಸೇವಕರತಂಡ ನಿಭಾಯಿಸಿತು.ಉಜಿರೆಯಿಂದಆರAಭವಾದ ಪಾದಯಾತ್ರೆ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಸಂಪೂರ್ಣಗೊAಡಿತು.
ವರದಿ: ಸುಚೇತಾ ಹೆಗ್ಡೆ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ, ಎಸ್.ಡಿ.ಎಂ ಕಾಲೇಜು, ಉಜಿರೆ
ಚಿತ್ರಗಳು: ಅರ್ಪಿತ್ ಇಚ್ಛೆ, ಶಶಿಧರ್ ಮತ್ತು ಗ್ಲೆನ್ ಮೋನಿಸ್, ಎಸ್.ಡಿ.ಎಂ ಕಾಲೇಜು, ಉಜಿರೆ