ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ || Minister Dinesh Gundurao visited Dharamsthala
ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.