ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ನಿಧನ | SK Bhagavan

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 90 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ.

ಜಯದೇವ ಆಸ್ಪತ್ರೆ ಸೇರಿದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಭಗವಾನ್ ಹುಟ್ಟಿದ್ದು ಜುಲೈ 5, 1993ರಲ್ಲಿ. ಅವರು ಪ್ರೌಢಶಿಕ್ಷಣವನ್ನು ಬೆಂಗಳೂರನಲ್ಲಿ ಪಡೆದರು. ಭಗವಾನ್​ ನಾಟಕದಲ್ಲಿ ಬಣ್ಣ ಹಚ್ಚುತ್ತಿದ್ದರು. ಕಣಗಲ್ ಪ್ರಭಾಕರ್ ಶಾಸ್ತ್ರಿ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದರು. ಅವರು ಸಹಾಯಕರಾಗಿ ಕೆಲಸ ಮಾಡಿದ ಮೊದಲ ಸಿನಿಮಾ ‘ಭಾಗ್ಯೋದಯ’ (1956). 1966ರಲ್ಲಿ ತೆರೆಗೆ ಬಂದ ‘ಸಂಧ್ಯಾರಾಗ’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದರು. ಆದರೆ, ಇದರ ಕ್ರೆಡಿಟ್​ನ ಎ.ಸಿ. ನರಸಿಂಹಮೂರ್ತಿಗೆ ನೀಡಲಾಯಿತು.

ಶ್ರೀನಿವಾಸ ಕೃಷ್ಣ ಅಯ್ಯಂಗಾರ್‌ ಭಗವಾನ್‌ ಎಂಬ ಹೆಸರಿದ್ದರೂ ಇವರು ಭಗವಾನ್‌ ಹೆಸರಿನಿಂದಲೇ ಪ್ರಸಿದ್ಧರು. ಡಾ. ರಾಜ್‌ ನಟನೆಯ ಬ್ಲಾಕ್‌ ಬಸ್ಟರ್‌ ಹಿಟ್‌ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ಆಪರೇಶನ್‌ ಡೈಮಂಡ್‌ ರಾಕೆಟ್‌’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದವರು.

Related Posts

Leave a Reply

Your email address will not be published.